Job Fair in Koppal 21-03-2022

Mar 09, 2022 10:49 am By Admin

ಮಾ.21 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ, ಸಂಜೀವಿನಿ ಎನ್‌ಆರ್‌ಎಲ್‌ಎಂ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ (ಖಾಗ್ರಾ) ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 21 ರಂದು ನಗರದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಉದ್ಯೋಗ Taluka stadium, Koppal ಮೇಳವನ್ನು ಹಮ್ಮಿಕೊಳ್ಳಲಾಗಿದೆ.

10 ಗಂಟೆಯಿoದ ಸಂಜೆ 05 ಗಂಟೆಯವರೆಗೆ ನಡೆಯಲಿರುವ ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಸಾರಿಗೆ, ಫಾರ್ಮಾ, ಬ್ಯಾಕಿಂಗ್, ಫೈನಾನ್ಸಿಯಲ್ಸ್ಗೆ ಸಂಬ0ಧಿಸಿದ ವಿವಿಧ ಕ್ಷೇತ್ರಗಳನ್ನೊಳಗೊಂಡ ಸುಮಾರು 50 ಕಂಪನಿಗಳು ಭಾಗವಹಿಸಲಿದ್ದು, 1100 ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.

ಮೇಳದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಿಂದ ಪದವಿ ವಿದ್ಯಾರ್ಹತೆವರೆಗಿನ ಉದ್ಯೋಕಾಂಕ್ಷಿಗಳು ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರಂ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

Link : https://forms.gle/m11qzC9PZ6JsDPfs5

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಈ ಕಛೇರಿಗೆ ಅಥವಾ ಮೊ.ಸಂ: 7618731311, 9972778248, 9743839859 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Source : Karnataka Varte Koppal